ಜೀವದ ಹುಟ್ಟಿನ ನಿಜಸ್ಥಿತಿಯನ್ನು ವಿವರಿಸಿ, ನಿಮಗೆ ತಾಜಾ ಮಾಹಿತಿಯನ್ನೊದಗಿಸುತ್ತದೆ ಈ ಕಿರು ಪುಸ್ತಕ. ಸರಳವಾದ ಭಾಷೆ, ಕುತೂಹಲ ಕೆರಳಿಸುವ ಘಟನೆಗಳು ಹಾಗೂ ಸನ್ನಿವೇಶಗಳು, ನಿಮ್ಮ ಚಿಂತನೆಯನ್ನು ಕೆದಕುವಂತಹ ಮಂಡನೆ, ರೋಮಾಂಚಕಾರೀ ವೈಜ್ಞಾನಿಕ ಪತ್ತೇದಾರಿಯ ಸ್ವಾರಸ್ಯಮಯ ನಿರೂಪಣೆ, ವಿಜ್ಞಾನಿಗಳು ಅನುಭವಿಸಿದ ಕಷ್ಟ ನಷ್ಟಗಳು, ಅವರು ಪಟ್ಟ ಅವಮಾನ, ಅವರು ಎದುರಿಸಿದ ಘೋರ ಘರ್ಷಣೆಗಳು, ಕಾಲಾನುಕಾಲಕ್ಕೆ ಹೇಗೆ ಹೊಸ ಹೊಸ ವಿಜ್ಞಾನಿಗಳು ಅವತರಿಸಿ, ಕೆಚ್ಚಿನಿಂದ, ಕಿಚ್ಚಿನಿಂದ, ಈ ಚಕ್ರವ್ಯೂಹವನ್ನು ಭೇದಿಸಿ, ಮುನ್ನುಗ್ಗಿ, ಮೂಡನಂಬಿಕೆಗಳನ್ನು ಸಾರಾಸಗಟಾಗಿ ತರಿದು, ವೈಜ್ಞಾನಿಕ ಮನೋಭಾವವನ್ನು ಬೆಳೆಸಿದರು [...]
Filed under: ಪತ್ತೇದಾರಿ ಸಾಹಿತ್ಯ, ವೈಜ್ಞಾನಿಕ ಸಾಹಿತ್ಯ | Leave a Comment »



