`ರೊಟ್ಟಿ ಮತ್ತು ಗುಲಾಬಿ’ ಘೋಷಣೆಯ ವಿಶ್ವ ಮಹಿಳಾ ದಿನಾಚರಣೆಗೆ ನೂರರ ಸಂಭ್ರಮ

ರೊಟ್ಟಿ – ತುಂಬಿದ ಹೊಟ್ಟೆಯ ಹಾಗೂ  ಗುಲಾಬಿ – ಗೌರವಾನ್ವಿತ ಬದುಕಿನ ಸಂಕೇತ. ಕೆಲವು ಮಹಿಳೆಯರು ಮಹಿಳೆ ಎನ್ನುವ ಕಾರಣದಿಂದಲೇ ಹಸಿವಿನಿಂದ ಬಳಲುತ್ತಿದ್ದರೆ ಇನ್ನೊಂದು ಭಾಗ ಹಸಿವಿನಿಂದಲ್ಲದಿದ್ದರೂ ತನ್ನೆಲ್ಲಾ ಕೊಡುಗೆಯಿದ್ದರೂ ನಿರ್ಧಾರದಲ್ಲಿ ಹೆಣ್ಣು ಎನ್ನುವ ಕಾರಣಕ್ಕೆ `ಎರಡನೇ ದರ್ಜೆ’ಗೆ ತಳ್ಳಲ್ಪಡುವ ಅವಮಾನದಿಂದ ಬಳಲುತ್ತಿದ್ದಾಳೆ. ಮಹಿಳೆಯ ಕುರಿತಾದ ಜೀವವಿರೋಧಿ ತಾರತಮ್ಯದ ವಿರುದ್ಧ ಹೋರಾಡಿದ, ಹೋರಾಡುತ್ತಿರುವ ಕೋಟಿ ಮಹಿಳೆಯರಿಗೆ ನಮ್ಮ ಧನ್ಯವಾದಗಳು. ಇಂತಹ ಸಮರಧೀರ ಮಹಿಳೆಯರಿಂದಾಗಿಯೇ (ನಿರಂತರ ಹೋರಾಟದ ನೂರು ವರ್ಷಗಳ ನಂತರವೂ) ಮಹಿಳೆಯರಿಗೆ ಕೆ(ಹ)ಲವು ಕೊರತೆಗಳಿದ್ದರೂ ಇಷ್ಟಾದರೂ ಒಳ್ಳೆಯ [...]

ದೇಶ ಕಟ್ಟುವ ಕನಸು ಕಾಣ್ಕೆಗಳು

ಪುಸ್ತಕದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಚಿಟಿಕೆ ಹೊಡೆಯಿರಿ ಚಿಂತನ ಪುಸ್ತಕ

ಯಾಕೆ ಮಾರ್ಕ್ಸ್ ಹೇಳಿದ್ದು ಸರಿ?

  ಶೀರ್ಷಿಕೆ: why marx was right ಲೇಖಕರು: ಟೆರಿ ಈಗಲ್ ಟನ್ ಪ್ರಕಾಶಕರು: ಯಾಲೆ ಯುನಿವರ್ಸಿಟಿ ಪುಟ:     ಬೆಲೆ:

ಮೇ ಡೇ ಚಿರಾಯುವಾಗಲಿ

ಶೀರ್ಷಿಕೆ: ಮೇ ಡೇ ಹುತಾತ್ಮದ ಮಹಾಗಾಥೆ  ಲೇಖಕರು:ವಿಲಿಯಂ ಆಡಲ್ ಮನ್  ಅನುವಾದ:ರಾಹು  ಪುಟಗಳು:278 ಬೆಲೆ:200/-

ವಿಶ್ವ ಆರೋಗ್ಯದಿನದ ಶುಭಾಶಯಗಳೊಂದಿಗೆ

ಭಾರತದಲ್ಲಿ ಜನಾರೋಗ್ಯ ಸಾಧನೆ ದೇಶ ಸ್ವಾತಂತ್ರ್ಯ ಪಡೆದು ಆರು ದಶಕಗಳೇ ಕಳೆದರೂ ಸಾಧ್ಯವಾಗದಿರುವುದು ವಿಷಾದದ ಸಂಗತಿ. ನಮ್ಮ ದೇಶದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಮೀಸಲಿಡುವ ಹಣ ಬಹಳ ಕಡಿಮೆ. ಬಡತನ, ಅನಕ್ಷರತೆ ಹೆಚ್ಚಾಗಿರುವ ಈ ದೇಶದಲ್ಲಿ ಸಹಜವಾಗಿಯೇ ರೋಗರುಜಿನಗಳು ಕೂಡ ಅಧಿಕ. ಔಷಧಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚಾಗಿರುವುದರಿಂದ ಮತ್ತು ಸರ್ಕಾರವೂ ಕೂಡ ಖಾಸಗೀಕರಣ ನೀತಿಗೆ ಪ್ರೋತ್ಸಾಹ ಕೊಡುತ್ತಿರುವುದರಿಂದ ರೋಗ ಚಿಕಿತ್ಸೆಗೆ ತಗಲುವ ವೆಚ್ಚಕ್ಕಿಂತ ರೋಗಪತ್ತೆಯ ವಿಧಾನಗಳಿಗೆ ಜನತೆ ಹಣ ಹೆಚ್ಚು ಖರ್ಚು ಮಾಡಬೇಕಾದ ಅನಿವಾರ್ಯತೆ ಸೃಷ್ಟಯಾಗಿದೆ. ಗ್ರಾಮೀಣ [...]

ರಹಮತ್ ತರೀಕೆರೆ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಾಗಿ ಅಭಿನಂದನೆಗಳು

ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾ ನಿಕಾಯದ ಡೀನ್ ಡಾ.ರಹಮತ್ ತರೀಕೆರೆ ಅವರ `ಕತ್ತಿಯಂಚಿನ ದಾರಿ’ ಕೃತಿಗೆ ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾ ನಿಕಾಯದ ಡೀನ್ ಡಾ.ರಹಮತ್ ತರೀಕೆರೆ ಅವರ `ಕತ್ತಿಯಂಚಿನ ದಾರಿ’ ಕೃತಿಗೆ ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. `ಈ ಕೃತಿಯನ್ನು 2006ರಲ್ಲಿಯೇ ರಚಿಸಿದ್ದು, ಈ ಪ್ರಶಸ್ತಿಯಿಂದ ನನಗೆ ಅತೀವ ಸಂತೋಷವಾಗಿದೆ. ನನ್ನ ಬೌದ್ಧಿಕ ಬೆಳವಣಿಗೆಗೆ ಕಾರಣವಾದ ಹಂಪಿ ಕನ್ನಡ ವಿ.ವಿ.ಯು [...]

ನಾಚಿಕೆಯಿಂದ ತಲೆತಗ್ಗಿಸುವ ದಿನ

ಡಿಸೆಂಬರ‍್ 6, 1992. ತಮ್ಮ ಜಾತ್ಯಾತೀತ ಸಂವಿಧಾನದ ಬಗ್ಗೆ ಹೆಮ್ಮೆ ಪಡುವಂತಹ ಭಾರತೀಯರೆಲ್ಲರೂ ನಾಚಿಕೆಯಿಂದ ತಲೆತಗ್ಗಿಸುವ ದಿನ. ಈ ದಿನದಂದು ಭಾರತೀಯರ ಹೆಮ್ಮೆಯ ಜಾತ್ಯಾತೀತ, ಪ್ರಜಾಪ್ರಭುತ್ವ ಹಾಗೂ ಸಂವಿಧಾನ ನಿಷ್ಟೆಯ ಮಹಾ ಗೋಪುರಗಳು ನೆಲಕಚ್ಚಿದ ದಿನ. ರೇಡಿಯೋ ಅಂಗಡಿಯಿಂದ ಆಕಸ್ಮಿತವಾಗಿ ವ್ಯಂಗ್ಯಲೋಕಕ್ಕೆ ಜಿಗಿದ ಪಿ. ಮಹಮ್ಮದ್ ಇಂದು ನಮ್ಮೊಂದಿಗಿನ ಅತ್ಯುತ್ತಮ ವ್ಯಂಗ್ಯಚಿತ್ರಕಾರರಲ್ಲೊಬ್ಬರು. ದಕ್ಷಿಣ ಕನ್ನಡ ಜಿಲ್ಲೆಯ ಪಡುಬಿದ್ರಿಯ ಮಹಮ್ಮದ್ ಇಂದು ಪರಿಚಿತ ಹೆಸರು. `ಸಂಯುಕ್ತ ಕರ್ನಾಟಕ’, `ಮುಂಗಾರು’ ಪತ್ರಿಕೆಗಳಲ್ಲಿ ವ್ಯಂಗ್ಯಚಿತ್ರಕಾರರಾಗಿ ದುಡಿದಿರುವ ಮಹಮ್ಮದ್  ಖ್ಯಾತ ಆಂಗ್ಲ ದೈನಿಕ [...]

ಕನ್ನಡವೇ ಸತ್ಯ ಕನ್ನಡವೇ ನಿತ್ಯ

ಕನ್ನಡ ರಾಜ್ಯೋತ್ಸವದ ಶುಭಾಶಯಗಳು ನವ ಉದಾರವಾದಿ ವರಸೆ ಭಾಷೆ ಮತ್ತು ಆ ಭಾಷೆಯನ್ನಾಡುವ ಜನರನ್ನು ತಮ್ಮ ನಿರ್ದಿಷ್ಟವಾದ ಅನುಭವ ಜಗತ್ತಿಗೆ ಮತ್ತೆ ಮತ್ತೆ ತಳ್ಳುತ್ತಿರುತ್ತದೆ. ಈ ಮೂಲಕ ಮಾರುಕ್ಟ್ಟೆ ತನ್ನ ವಿಶ್ವಸ್ಥ ಸ್ವರೂಪವನ್ನು ಸಾಧಿಸುತ್ತದೆ ಮತ್ತು ನಮ್ಮನ್ನು ಅದರೊಳಗೆ ಸೇರಿಯೂ ಸೇರದಂಥ `ಪ್ರತ್ಯೇಕತೆ’ಯನ್ನು ಉಳಿಸಿಕೊಳ್ಳುತ್ತಿರುತ್ತದೆ. ಇದು ಲಾಭಕೋರತನವನ್ನು ಪುಸಲಾಯಿಸುವ ನುರಿತ ಚೇಷ್ಟೆ. ಆದರೆ ಇಲ್ಲಿ ಆಡುಮಾತಿನ ವರಸೆಯತ್ತ ಬರಹ ದಾಪುಗಾಲಿಟ್ಟು, ಬರಹದ ಮೂಲಕ ಭಾಷೆಯನ್ನು ಪ್ರಮಾಣೀಕರಿಸಿರುವ ಬಗೆಯನ್ನು ನಾವು ಗಮನಿಸಲೇ ಬೇಕು. ಆದರೆ ಹಾಗೆ ಮಾಡುವಾಗ ಸಾಮಾಜಿಕ [...]

ಗಾಂಧೀಜಿ ಉದಾರೀಕರಣವನ್ನು ಸ್ವಾಗತಿಸುತ್ತಿದ್ದರೇ?

ಗಾಂಧೀಜಿಯ ಮಹಾನತೆಯ ಬಗ್ಗೆ ಇಂತಹ ತದ್ವಿರುದ್ಧವಾದ ನಿಲುವುಗಳು ಹೊಸದೇನಲ್ಲ. ಏಕೆ ಗಾಂಧೀಜಿಯ ಮಹಾನತೆ ಹಾಗೂ ಗಾಂಧೀವಾದದ ಬಗ್ಗೆ ಇಂತಹ ಗೊಂದಲ? ಗಾಂಧೀಜಿಯ ಮಹಾನತೆಯನ್ನು ವಿವರಿಸುವ ಕೃತಿಗಳೇನೋ ವಿಫುಲವಾಗಿ ದೊರೆಯುತ್ತವೆ. ಆದರೆ ಈ ಅಪರೂಪದ ಇತಿಹಾಸಪುರುಷನ ಮಹಾನತೆಯನ್ನು, ಗಾಂಧಿವಾದವೆಂದರೆ ನಿಜವಾಗಿ ಏನು ಎಂಬುದನ್ನು ವಸ್ತುನಿಷ್ಠವಾಗಿ ವಿಶ್ಲೇಷಿಸುವ ಕೃತಿಗಳು ಮಾತ್ರ ಅಪರೂಪ. ಇಂತಹ ಅಪರೂಪದ ಕೃತಿಗಳಲ್ಲಿ ಹಿರಿಯ ಮಾರ್ಕ್ಸ್‌ವಾದೀ ಚಿಂತಕ ಹಾಗೂ ಮುತ್ಸದ್ದಿ ಇ.ಎಂ.ಎಸ್. ನಂಬೂದರಿಪ್ಪಾಡ್ ರವರ “The Mahatma and The Ism” ಪುಸ್ತಕವೂ ಒಂದು. ಇ.ಎಂ.ಎಸ್. ನಂಬೂದರಿಪ್ಪಾಡ್ [...]

ಹುತಾತ್ಮ ಭಗತ್ ಸಿಂಗರ ಅಲ್ಪಕಾಲದ ಬದುಕಿನ ಅಸಾಮಾನ್ಯ ಹರಹಿನ ಸಂಗ್ರಹರೂಪ

ಕೇವಲ 23 ವರ್ಷಗಳ ಬದುಕು. ಅಷ್ಟರಲ್ಲೇ ಇತಿಹಾಸದಲ್ಲಿ ಒಂದು ಶಾಶ್ವತ ಸ್ಥಾನ ಪಡೆದ ಭಗತ್ ಸಿಂಗ್ ಹುತಾತ್ಮನಾಗಿ ೮೦ ವರ್ಷಗಳಾಗುತ್ತಿದ್ದರೂ ಈಗಲೂ ಯುವಜನರ ಆರಾಧ್ಯ ಮೂರ್ತಿ, ಅದರಲ್ಲೂ ಒಂದು ಸಮಾನತೆಯ ಸಮಾಜದ ಕನಸನ್ನು ತುಂಬಿಕೊಂಡಿರುವವರಿಗೆ. ಧೈರ್ಯ, ಸಾಹಸ, ತ್ಯಾಗ, ಜತೆಗೆ ತಾತ್ವಿಕ ಸ್ಪಷ್ಟತೆ ಮತ್ತು ಜನಮಾನಸವನ್ನು ತಟ್ಟು ಸಾಮರ್ಥ್ಯ ಅವರ ಬದುಕನ್ನು ಅಮರಗಾಥೆಯನ್ನಾಗಿಸಿದೆ. ಸಹಜವಾಗಿಯೇ ಬಾಲಿವುಡ್ ಕೂಡಾ ಈ ಗಾಥೆಯ ಆಕರ್ಷಣೆಗೆ ಒಳಗಾಗದಿಲ್ಲ. ಅವರ ಮೇಲೆ ಕನಿಷ್ಟ ಐದು ಚಲನಚಿತ್ರಗಳು ತಯಾರಾಗಿವೆ. ಬರವಣಿಗೆಗಳಂತೂ ಲೆಕ್ಕವಿಲ್ಲದಷ್ಟು. ಭಗತ್ ಸಿಂಗ್ [...]

Follow

Get every new post delivered to your Inbox.