ದೊರೆತಿರುವ ವಸ್ತು ಅವಶೇಷಗಳು ಏನು ತಿಳಿಸುತ್ತವೆ

ಕೋಮುವಾದಿ ಮನೋಧರ್ಮದಿಂದ ಭಾರತದ ಇತಿಹಾಸವನ್ನು ಬರೆಯ ಹೋಗುವುದು ದೇಶದ ನಿಜವಾದ ಇತಿಹಾಸವನ್ನು ತಿಳಿಯುವುದಕ್ಕೂ ಅದರ ಕೂಲಂಕಷ ಅಧ್ಯಯನಕ್ಕೂ ಅನೇಕ ಅಡಚಣೆಗಳನ್ನು ತಂದೊಡ್ಡುತ್ತದೆ. ಯಾವುವು ಈ ಅಡಚಣೆಗಳು, ಅವು ಎಂತಹ ಮಿತಿಗಳನ್ನು ಸೃಷ್ಟಿಸುತ್ತವೆ ಮತ್ತು ಇವುಗಳನ್ನು ನಿವಾರಿಸಿಕೊಳ್ಳಬೇಕಾದರೆ ಯಾವ ಮನೋಧರ್ಮ ತಳೆಯಬೇಕು ಅನ್ನುವುದನ್ನು ಈ ಕಿರು ಹೊತ್ತಗೆಯಲ್ಲಿ ಸೂಕ್ತ ಉದಾಹರಣೆಗಳೊಂದಿಗೆ ಸ್ಥೂಲವಾಗಿ ವಿವೇಚಿಸಲಾಗಿದೆ. ಇತಿಹಾಸದ ನೈಜ ಚಿತ್ರಣವೆಂದರೆ ಆಯಾ ಕಾಲಗಳಲ್ಲಿದ್ದ ಸಾಮಾನ್ಯ ಜನರ ಜೀವನ ಚಿತ್ರಣ; ಆಗ ಇದ್ದ ಸಾಮಾಜಿಕ ಸಂರಚನೆಯ ಒಳನೋಟದ ದರ್ಶನ; ಆಗ ಇದ್ದ ಉತ್ಪಾದಕ [...]

ಮಹಾಮತ್ತಿನ ಮಠಗಳು

ಕೆಳದಿಯ ಅರಸರ ಕಾಲದಲ್ಲಿ ನಿರ್ಮಾಣವಾದ ಮಹಾಮತ್ತಿನ ಮಠಗಳಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕವಲೆದುರ್ಗದ ಮಥವೂ ಒಂದು. ಇದು ವೀರಶೈವ ಪರಂಪರೆಗೆ ಸೇರಿದ ಮಠ. ಇಂಥ ಅನೇಕ ಮಥಗಳು ನಿರ್ಮಾನವಾಗಿದ್ದರೂ ಅವುಗಳಲ್ಲಿ ಕೆಲವು ಈಗ ಇಲ್ಲವಾಗಿವೆ. ಈಗ ಬೆಂಗಳೂರು, ತುಮಕೂರು, ಕರಾವಳಿ, ಕೊಡಗಿನಲ್ಲಿರುವ ಮಹತ್ತಿನ ಮಠಗಳ ಬಗ್ಗೆ ನಡೆಸಿದ ಅಧ್ಯಯನ ಈ ಪುಸ್ತಕದಲ್ಲಿದೆ. ಇದನ್ನು ಕವಲೆದುರ್ಗದ ಮಠವೇ ಪ್ರಕಟಿಸಿದೆ. ಕರ್ನಾಟಕದ ವೀರಶೈವ ಮಠಗಳಲ್ಲಿ ಎರಡು ಪರಂಪರೆಗಳು ಇವೆ. ಒಂದು ರಾಜಾಶ್ರಯ ಪಡೆದು, ನೂರಾರು ಶಾಖೆಗಳನ್ನು ಹೊಂದಿರುವ ಮಹಾಮತ್ತಿನ [...]

ಮರಾಟಿ ಕುಣುಬಿಗಳು

ಉತ್ತರ ಕನ್ನಡದ ಕಾಳಿ ನದಿಯ ದಂಡೆಯಿಂದ ಶರಾವತಿ, ತುಂಗಾ ನದಿಗಳವರೆಗೆ ತಮ್ಮ ವಾಸದ ವ್ಯಾಪ್ತಿಯನ್ನು ಹೊಂದಿರುವ ಮರಾಟಿ ಕುಣಬಿಗಳು ಒಂದು ವಿಶಿಷ್ಟ ಬುಡಕಟ್ಟಾಗಿದೆ. ಮಲೆನಾಡಿನಲ್ಲಿ ಹರಡಿಕೊಂಡಿರುವ ಈ ಬುಡಕಟ್ಟಿನ ಬಗ್ಗೆ ಸೂಕ್ಷ್ಮವಾಗಿ, ವಸ್ತುನಿಷ್ಟವಾಗಿ ಅಧ್ಯಯನ ಮಾಡಿದ್ದಾರೆ ಜೆ.ಕೆ.ರಮೇಶ್. ಮರಾಟಿ ಕುಣಬಿಗಳು ಗಿರಿಜನರು. ಅವರು ಪ್ರಕೃತಿಯನ್ನು ಅವಲಂಬಿಸಿ ಬದುಕುತ್ತಿರುವವರು. ಅವರು ಮಾಡುತ್ತಿರುವ ವ್ಯವಸಾಯ ಕುಮರಿ ಬೇಸಾಯ. ಇದರೊಂದಿಗೆ ಅವರು ಇಲ್ಲಿ ವಲಸೆ ಬಂದು ಕರ್ನಾಟಕದಲ್ಲಿ ನೆಲೆಯಾದವರು. ಇಂಥ ಕಾಡಿನ ಜೀವಿಗಳ ಸಂಪ್ರದಾಯ, ಸಾಮಾಜಿಕ ಕಟ್ಟಳೆಗಳು, ಅದರ ಸ್ವರೂಪ, ಕಲೆ, [...]

ಚಿತ್ರದುರ್ಗದ ಕೋಟೆ ಪರಿಸರದ ದೇವಾಲಯಗಳು

ಈ ವಿಷಯದ ಬಗ್ಗೆ ಇದೇ ಮೊದಲ ಬಾರಿಗೆ ಇಂತಹದೊಂದು ಪುಸ್ತಕ ಹೊರಬಂದಿದೆ. ಎನ್. ಎಸ್. ಮಹಂತೇಶ ಇನ್ನೂ ಯುವಕರಾದರೂ ಆಳವಾದ ಅಧ್ಯಯನ ಹಾಗೂ ಅಗಾಧವಾದ ಕ್ಷೇತ್ರಕಾರ್ಯದ ಮೂಲಕ ಈಗಾಗಲೇ ಚಿತ್ರದುರ್ಗ ಇತಿಹಾಸದ ಬಗ್ಗೆ ಇರುವ ತಕ್ಕ ಮಟ್ಟಿನ ಸಂಶೋಧನಾ ಗ್ರಂಥಗಳ ಜತೆಗೆ ಮತ್ತೊಂದು ಹೊಸ ವಿಷಯವನ್ನು ಸೇರ್ಪಡೆ ಮಾಡಿದ್ದಾರೆ. ಹುಲ್ಲೂರು ಶ್ರೀನಿವಾಸ ಜೋಯಿಸ, ಲಕ್ಷ್ಮಣ ತೆಲಗಾವಿ, ಬಿ. ರಾಜಶೇಖರಪ್ಪ, ಶ್ರೀ ಶೈಲಾರಾಧ್ಯ – ಮುಂತಾದ ನಾಡಿನ ಹೆಸರಾಂತ ಸಂಶೋಧಕರು ಚಿತ್ರದುರ್ಗದ ಇತಿಹಾಸದ ಬಗ್ಗೆ ಅಪಾರ ಸಂಶೋಧನೆ ಮಾಡಿದ್ದಾರೆ. [...]

Follow

Get every new post delivered to your Inbox.