ಒಡೆದ ಕೋಟೆ, ಅಗ್ನಿ ಪರ್ವತ ಇತ್ಯಾದಿ

scan0011
ತಮಿಳಿನ ಮುಖ್ಯ ಲೇಖಕರ ಕತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಪಾ.ಶ. ಶ್ರೀನಿವಾಸ. ಈ ಸಂಕಲನದಲ್ಲಿ ಕಲ್ಕಿ, ಅಖಿಲನ, ಜಯಕಾಂತನ್, ಇಂದುಮತಿ ಮೊದಲಾದ ಕತೆಗಾರರ ಎಂಟು ಕತೆಗಳು ಇವೆ.
ಕಲ್ಕಿಯವರ ‘ಒಡೆದ ಕೋಟೆ’, ಅಖಿಲನ್ ಅವರ ‘ಅಗ್ನಿ ಪರ್ವತ’, ಜಯಕಾಂತನ್ ಅವರ ‘ಉಪವಾಸ ವ್ರತ’, ಇಂದುಮತಿ ಅವರ ‘ಮೆರವಣಿಗೆ”, ಮಾಲನ ಅವರ ‘ಜಾಗ’, ಇಲ್ಲಿನ ಮುಖ್ಯ ಕಥೆಗಳಾಗಿವೆ. ಇವೆಲ್ಲವನ್ನೂ ಶ್ರೀನಿವಾಸ ಮೂಲದ ಅಂದಗೆಡದಂತೆ ಅನುವಾದಿಸಿದ್ದಾರೆ. ಭಾರತೀಯ ಭಾಷೆಗಳ ಕತೆಗಳ ಬಗ್ಗೆ ಕುತೂಹಲ ಇರುವವರಿಗೆ ಇದೊಂದು ಒಳ್ಳೆಯ ಓದಾಗುತ್ತದೆ.
ಇದರೊಂದಿಗೆ ತಮಿಳು ಕತೆಗಳ ಬಗ್ಗೆ ಚಿಕ್ಕದಾದ ಪ್ರವೇಶವನ್ನು ಅನುವಾದಕರು ಕೊಟ್ಟಿದ್ದಾರೆ. ಇದು, ಕಥೆಗಳ ಮೊದಲಿಗೆ ಬರುವ ಲೇಖಕರ ಪರಿಚಯ ಕಥೆಗಳನ್ನು ಒಟ್ಟಾರೆ ಅರಿಯಲು ಸಹಾಯಕವಾಗಿವೆ. ಇಲ್ಲಿ ಅನುವಾದಗೊಂಡಿರುವ ಕಥೆಗಾರರೆಲ್ಲ ಹಿರಿಯ ತಲೆಮಾರಿಗೆ ಸೇರಿದವರು. ಯುವ ಕಥೆಗಾರರ ಕತೆಗಳು ಇಲ್ಲದಿರುವುದು ಈ ಸಂಕಲನದ ಕೊರತೆ ಎಂದೇ ಹೇಳಬಹುದು.

ಶೀರ್ಷಿಕೆ : ಪ್ರಸಾದ (ತಮಿಳು ಸಣ್ಣ ಕತೆಗಳ ಸಂಕಲನ) ಅನು:ಪಾ.ಶ.ಶ್ರೀನಿವಾಸ  ಪ್ರಕಾಶಕರು:ಪ್ರಿಯದರ್ಶಿನಿ ಪ್ರಕಾಶನ ಪುಟ:೧೪೮ ಬೆಲೆ: ರೂ.100/-

ಕೃಪೆ: ಪ್ರಜಾವಾಣಿ